ತಿರುವನಂತಪುರ,ಡಿ 18 (MSP): ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಅಶೋಕನ್ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.
ತಿರುವನಂತಪುರದಲ್ಲಿ ಇಂದು ಅವರು ಅಧಿಕೃತವಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದಿದ್ದು, ಪಕ್ಷ ಸೇರ್ಪಡೆಯ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು ಬಿಜೆಪಿ ಸೇರ್ಪಡೆಯಾಗಿ ಮೂರು ವರ್ಷಗಳೇ ಕಳೆದಿದೆ. ಆದರೆ ಇಂದು ನನಗೆ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ದೊರಕಿದೆ. ಈ ಹಿಂದೆ ನಾನು ಕಮ್ಯುನಿಸ್ಟ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದೆ. ಆದರೆ ಪಕ್ಷದ ಸಿದ್ಧಾಂತಗಳು ಮತ್ತು ಅಜೆಂಡಾಗಳು ನನಗೆ ಇಷ್ಟವಾಗದೇ ಅದನ್ನು ತ್ಯಜಿಸಿದ್ದೆ ಎಂದರು.
ಅಲ್ಲದೆ ಬಿಜೆಪಿ ಜತೆಗೂಡಿ ಶಬರಿಮಲೆ ಹೋರಾಟದಲ್ಲಿ ಭಾಗವಹಿಸುವುದಾಗಿ ಹೇಳಿದ ಅವರು, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮರು ಪರಿಶೀಲನೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.