ಮಂಗಳೂರು, ಡಿ 21(SM): ಮೈಸೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದ ದುರಂತವಾದ ಹಿನ್ನೆಲೆ ಕರಾವಳಿಯ ಮುಜರಾಯಿ ದೇವಸ್ಥಾನಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ.
ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಕ್ಷಾ ಕ್ರಮಕ್ಕೆ ಆಡಳಿತ ಮಂಡಳಿ ಮುಂದಾಗಿದೆ. ಈ ಹಿನ್ನೆಲೆ ಅಡುಗೆ ತಯಾರಿ, ಆಹಾರ ಶೇಖರಣೆ, ಪ್ರಸಾದ ಕೊಠಡಿಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ದೇವರ ನೈವೇದ್ಯ, ದಾಸೋಹ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾಹಿತಿ ನೀಡಿದ್ದಾರೆ.