ಬೆಂಗಳೂರು, ಡಿ21(SS): ಕರ್ನಾಟಕ ರಾಜ್ಯದಲ್ಲಿರುವ ಕ್ರಿಶ್ಚಿಯನ್ನರ ಅಭಿವೃದ್ಧಿ, ಏಳಿಗೆ ಹಾಗೂ ಕಲ್ಯಾಣಕ್ಕಾಗಿ ಶೀಘ್ರದಲ್ಲಿಯೇ ನೂತನ ಮಂಡಳಿಯನ್ನು ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ.
ನಗರದಲ್ಲಿ ಕ್ರಿಶ್ಚಿಯನ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಆಲಿಸಲು ಹಾಗೂ ಅವರ ಏಳಿಗೆಗಾಗಿ ಹೆಚ್ಚಿನ ಅನುದಾನವನ್ನು ಮೀಸಲಿಡುವುದಕ್ಕಾಗಿ ನೂತನ ಮಂಡಳಿ ರಚನೆ ಮಾಡುವುದಾಗಿ ಹೇಳಿದ್ದಾರೆ.
ಶೀಘ್ರದಲ್ಲಿಯೇ ಕ್ರಿಶ್ಚಿಯನ್ ಅಭಿವೃದ್ಧಿಗಾಗಿ ಮಂಡಳಿಯನ್ನು ರಚನೆ ಮಾಡಲಾಗುತ್ತದೆ. ಮಂಡಳಿ ಮೂಲಕ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ, ಪರಿಹಾರಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ತಿಳಿಸಿದ್ದಾರೆ.