ಮಂಗಳೂರು, ಅ 20: ಕಾವೂರಿನ ಗಾಂಧಿ ನಗರದಲ್ಲಿ ಶುಕ್ರವಾರ ಮದ್ಯಾಹ್ನ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ. ಶರೀಫ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣ, ಕಾಪಾಟು, ಹಾಗೂ ಬಟ್ಟೆ ಬರೆಗಳು ಗಳು ಸುಟ್ಟು ಕರಲಾಗಿದೆ. ಇನ್ನು ಬೆಂಕಿ ಅಕಸ್ಮಿಕದಿಂದ ಒಂದು ಲಕ್ಷದಷ್ಟು ನಷ್ಟ ಅಂದಾಜಿಸಲಾಗಿದೆ. ಸ್ಥಳೀಯರ ಸಹಯೋಗದೊಂದಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ಹತೋಟಿಗೆ ತರುವಲ್ಲಿ ಸಫಲರಾಗಿದ್ದಾರೆ