ಮಂಗಳೂರು, ಡಿ 22(MSP):ಪರಾರಿ ಜಂಕ್ಷನ್ ಬಳಿ ಪರವಾನಗಿ ಇಲ್ಲದೇ ಮರಳು ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡಿರುವ ಮೂರು ಲಾರಿ ಮತ್ತು ಅದರಲ್ಲಿ ತುಂಬಿದ ಮರಳಿನ ಒಟ್ಟು ಮೌಲ್ಯ 25.15 ಲಕ್ಷ ಎಂದು ಅಂದಾಜಿಸಲಾಗಿದೆ.
ಸಾಂದರ್ಭಿಕ ಚಿತ್ರ
ತಿರುವೈಲು ಪರಾರಿ ಜಂಕ್ಷನ್ ಬಳಿ ವಾಹನ ತಪಾಸಣೆ ಸಂದರ್ಭ ಪರಾರಿ ಜಂಕ್ಷನ್ ಕಡೆಗೆ ಬರುತ್ತಿದ್ದ ಮೂರು ಟಿಪ್ಪರ್ ನಿಲ್ಲಿಸಿ ಪರಿಶೀಲಿಸಿದಾಗ ಅವುಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ, ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳದ ತಂಡದೊಂದಿಗೆ ಎಎಸ್ಐ ಮೋಹನ್ ಅವರು ತಪಾಸಣೆ ಮಾಡಿದಾಗ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಟಿಪ್ಪರ್ ಹಾಗೂ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ.