ಲಖನೌ, ಡಿ 23(SM): ಅಯೋಧ್ಯೆಯಲ್ಲಿ ಯಾವಾಗ ಬೇಕಾದರೂ ರಾಮಮಂದಿರ ನಿರ್ಮಾಣವಾಗಬಹುದು, ಆದರೆ, ಅದನ್ನು ನಿರ್ಮಾಣ ಮಾಡಿರುವುದು ಮಾತ್ರ ಬಿಜೆಪಿ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಬೇರೆ ಯಾವ ಪಕ್ಷವೂ ರಾಮಮಂದಿರ ನಿರ್ಮಿಸಲು ಸಾಧ್ಯವಿಲ್ಲ. ರಾಮ ಹಾಗೂ ಕೃಷ್ಣ ಅಸ್ತಿತ್ವದಲ್ಲೇ ಇರಲಿಲ್ಲ ಅಂದವರು ಇವರೇ. ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುತ್ತಾರೆ ಎಂಬ ಯಾವ ನಿರೀಕ್ಷೆಯೂ ಇಟ್ಟುಕೊಳ್ಳಬೇಡಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಯೋಗಿ ಆದಿತ್ಯನಾಥ್ ಟೀಕಿಸಿದರು.
ನಮ್ಮ ಇತಿಹಾಸದ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. ಅದನ್ನು ಸರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.