ಬಂಟ್ವಾಳ, ಅ 21: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭೇಟಿ ನೀಡಲಿದ್ದು, ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನೆಲೆ ಬಂಟ್ವಾಳದಲ್ಲಿ ಈಗಾಗಲೇ ಎಲ್ಲಾ ತಯಾರಿಗಳು ಪೂರ್ಣಗೊಂಡಿದೆ. ಬಿ.ಸಿ. ರೋಡಿನಲ್ಲಿ ನಿರ್ಮಾಣಗೊಂಡಿರುವ ಮಿನಿ ವಿಧಾನ ಸೌಧ, ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ, ಮೆಸ್ಕಾಂ ಕಚೇರಿ, ಕುಡಿಯುವ ನೀರಿನ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಇನ್ನು ಸಿಎಂ ಸಿದ್ದರಾಮ್ಮಯ್ಯಗೆ ಸ್ವಾಗತಿಸಲು ಕಾಂಗ್ರೆಸ್ ಸಕಲ ಸಿದ್ದತೆಗಳನ್ನು ನಡೆಸಿದ್ದು, ಫ್ಲೆಕ್ಸ್ ಬ್ಯಾನರ್ ಗಳು ರಾರಾಜಿಸುತ್ತಿವೆ. ಇನ್ನೊಂದೆಡೆ ಸಿಎಂ ಆಗಮನ ಹಿನ್ನೆಲೆ ಪೊಲೀಸರು ಭದ್ರತಾ ಕ್ರಮ ಕೈಗೊಂಡಿದ್ದಾರೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯ ಕೂಡ ಭರದಿಂದ ಸಾಗಿದೆ.