ಬಂಟ್ವಾಳ, ಡಿ29(SS): ಕೆಲ ತಿಂಗಳುಗಳ ಹಿಂದೆ ಬಂಟ್ವಾಳದ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಸಜಿಪ ನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಡಾಂಬರ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಕ್ಕಿಲಾಡಿ ಪುತ್ತೂರು ತಾಲೂಕಿನ ಉಮ್ಮರುಲ್ ಫಾರೂಕ್ (24), ಮೇಗಿನ ಪೇಟೆ ಮನೆ ವಿಟ್ಲ ಕಸಬಾ ಗ್ರಾಮದ ಮಹಮ್ಮದ್ ಅಶ್ರಫ್ (24) ಬಂಧಿತ ಆರೋಪಿಗಳು.
ಈ ಪ್ರಕರಣಕ್ಕೆ ಸಂಬಂದಿಸಿದಂತೆ ಒಟ್ಟು 43 ಬ್ಯಾರೆಲ್ ಡಾಂಬರ್ ಪೊಲೀಸರು ವಶಪಡಿಸಿಕೊಂಡಿದ್ದು, ಸೊತ್ತುಗಳ ಒಟ್ಟು ಮೌಲ್ಯ ಸುಮಾರು 3 ಲಕ್ಷ ರೂ ಎಂದು ಅಂದಾಜಿಸಲಾಗಿದೆ. ಮಾತ್ರವಲ್ಲ, ಡಾಂಬರ್ ಕದಿಯಲು ಉಪಯೋಗಿಸಿದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂದಿಸಿದ 3 ಜನ ಆರೋಪಿಗಳು ತಲೆಮರಿಸಿಕೊಂಡಿದ್ದು, ಪತ್ತೆಗೆ ತನಿಖೆ ಮುಂದುವರಿದಿದೆ.
ಮಾನ್ಯ ಪೊಲೀಸ್ ಅಧೀಕ್ಷಕರಾದ ರವಿಕಾಂತೇಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಜಿತ್ ವಿ.ಜೆ, ಬಂಟ್ವಾಳ ಉಪ ವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಭಗವಾನ್ ಸೋನಾವಣೆ, ಪೊಲೀಸ್ ವೃತ್ತ ನಿರೀಕ್ಷಕರಾದ ಟಿ .ಡಿ. ನಾಗರಾಜ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷರಾದ ಪ್ರಸನ್ನ ಎಂ.ಎಸ್, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಪೊಲೀಸ್ ಉಪ ನಿರೀಕ್ಷಕರಾದ ಹರೀಶ್ ಎಮ್.ಆರ್, ಅಪರಾಧ ಸಿಬ್ಬಂದಿಗಳಾದ ಗಿರೀಶ್, ಜಯರಾಂ, ಸುರೇಶ್, ಪಿಸಿಗಳಾದ ನಝಿರ್, ಸತೀಶ್, ಆದರ್ಶ, ಬಸವರಾಜ್, ರಂಜಾನ್, ಕುಮಾರ್, ವಿವೇಕ್ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.