ಮಂಗಳೂರು, ಅ22 : ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವಾಗ ಪ್ರತಿಪಕ್ಷಗಳಿಂದ ಇಲ್ಲಸಲ್ಲದ ಆರೋಪ ಸಾಮಾನ್ಯ. ಕಲ್ಲಿದ್ದಲು ಹಗರಣ ಆರೋಪ ದುರುದ್ದೇಶ ಪೂರಿತ ಮತ್ತು ಆಧಾರ ರಹಿತ ಎಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ರವಿವಾರ ಬಂಟ್ವಾಳ ಹಾಗೂ ಧರ್ಮಸ್ಥಳದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ದಕ್ಷಿಣ ಕನ್ನಡ ಜಿಲ್ಲೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ ಕಲ್ಲಿದ್ದಲು ಹಗರಣದ ಬಗ್ಗೆ ಸಚಿವ ಡಿ.ಕೆ ಶಿವಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಟಿಪ್ಪು ಕಾರ್ಯಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಟಿಪ್ಪು ಜಯಂತಿ ಮಾಡಿಯೇ ಮಾಡ್ತೀವಿ , ಸರಕಾರದ ಕಾರ್ಯಕ್ರಮದಲ್ಲಿ ಬಿಜೆಪಿಯವರು ಟಿಪ್ಪು ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ,ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇವೆ ಆದರೆ ಬರುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.