ಧರ್ಮಸ್ಥಳ,ಜ 02(MSP):ಶಬರಿಮಲೆಗೆ ಮಹಿಳೆಯರು ಪ್ರವೇಶ ವಿಚಾರವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ದು ಒಳ್ಳೆದಾಯ್ತಲ್ಲ. ಈಗಲಾದರೂ ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ? ಎಂದು ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಬರಿಮಲೆ ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯವಾಗಿರುತ್ತದೆ. ಕಠಿಣ ವ್ರತಾಚರಣೆ ಮಾಡಿ ನಿಯಮ ಪಾಲನೆ ಮಾಡಬೇಕಾಗುತ್ತದೆ. ಇಲ್ಲಿ ಬ್ರಹ್ಮಚರ್ಯ, ಸಂಯಮ ಸಾಧಿಸುವುದು ಮುಖ್ಯವಾಗಿರುತ್ತದೆ. ಆದರೆ ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ .ಇಂತವರಿಂದಲೂ ಅಪಚಾರಗಳಾಗುತ್ತಿವೆ ಎಂದು ಡಾ. ಡಿ ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ.