ಕುಂದಾಪುರ, ಜ 02(MSP): ಚಲಿಸುತ್ತಿದ್ದ ಬೈಕಿಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಗಮಬೀರ ಗಾಯಗೊಂಡ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಎಂಬಲ್ಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗಂಗೊಳ್ಳಿಯ ದಾಕುಹಿತ್ಲು ನಿವಾಸಿ ಗುರುಪ್ರಸಾದ್ ಪೂಜಾರಿ(28) ಎಂದು ಗುರುತಿಸಲಾಗಿದೆ.
ಗುರುಪ್ರಸಾದ್ ಪೂಜಾರಿ ಗಂಗೊಳ್ಳಿ ಮುಖ್ಯರಸ್ತೆಯಲ್ಲಿ ತನ್ನ ಬೈಕಿನಲ್ಲಿ ಬರುತ್ತಿದ್ದರು. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟ ಗುರುಪ್ರಸಾದ್ ತಲೆಗೆ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಹೋಟೆಲ್ ಉದ್ಯೋಗಿಯಾಗಿದ್ದು, ರಜೆಯ ನಿಮಿತ್ತ ಹತ್ತು ದಿನಗಳ ಹಿಂದೆ ಊರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.