ಬೆಂಗಳೂರು, ಜ 03(MSP):ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಸ್ಯಾಂಡಲ್ವುಡ್ನ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಜ.3 ರ ಬುಧವಾರ ಬೆಳಗ್ಗೆ ಖ್ಯಾತ ನಟ ಶಿವರಾಜ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ಅಲ್ಲದೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಸುಮಾರು 10ಕ್ಕೂ ಹೆಚ್ಚು ಕಡೆ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ