ನವದೆಹಲಿ,ಜ 04(MSP): ಅಯೋಧ್ಯೆಯ ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್ ಮಂಡಳಿಗೆ ಸಮನಾಗಿ ಹಂಚಿಕೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ನೂತನ ನ್ಯಾಯಪೀಠಕ್ಕೆ ವರ್ಗಾಯಿಸುವುದಾಗಿ ಸುಪ್ರೀಂ ಕೋರ್ಟ್ ಜ.4 ರ ಗುರುವಾರ ತಿಳಿಸಿದೆ.
ವಿವಾದಿತ ಭೂಪ್ರದೇಶದ ಹಂಚಿಕೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠ ಇಂಇನ ವಿಚಾರಣೆಯನ್ನು ಕೇವಲ ಒಂದೇ ನಿಮಿಷದಲ್ಲಿ ಪೂರ್ಣಗೊಳಿಸಿತು. ಅಲ್ಲದೆ, ಹೊಸ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜ. 10ರಿಂದ ಆರಂಭಿಸಲಿದೆ ಎಂದು ಹೇಳಿದೆ.