ಬೆಂಗಳೂರು, ಜ05(SS): ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜನವರಿ 9 ರಂದು ಮೋದಿ ಮತ್ತು ಶಾ ತುಮಕೂರಿಗೆ ಆಗಮಿಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿದೆ. ಒಂದೇ ದಿನದಲ್ಲಿ ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹೀಗೆ 5 ಲೋಕಸಭೆ ಕ್ಷೇತ್ರಗಳ ಪ್ರಮುಖರ ಜೊತೆ ವಿಶೇಷ ಸಭೆ ನಡೆಸಲಿದ್ದಾರೆ.
ಈ 5 ಲೋಕಸಭೆ ಕ್ಷೇತ್ರಗಳ ಬೂತ್ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 20 ರಿಂದ 30 ಸಾವಿರ ಪ್ರಮುಖ ಕಾರ್ಯಕರ್ತರ ಜೊತೆ ವಿಶೇಷ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮಾತ್ರವಲ್ಲ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.