ಕಾಸರಗೋಡು, ಜ 06(SM): ನಾಲ್ಕು ದಿನದ ಹಸುಳೆಯನ್ನು ಮಂಗಳೂರಿನಿಂದ ತಿರುವನಂತಪುರದ ಆಸ್ಪತ್ರೆಗೆ ತಲಪಿಸಿ ಮರಳುತ್ತಿದ್ದ ವೇಳೆ ಆಂಬುಲೆನ್ಸ್ ಅಪಘಾತಕ್ಕೀಡಾಗಿ ಸೈಕಲ್ ಸವಾರರೋರ್ವ ಮೃತಪಟ್ಟ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಚಂದ್ರನ್(60) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆ ಹಿನ್ನಲೆಯಲ್ಲಿ ತುರ್ತು ಚಿಕಿತ್ಸೆಗೆ ಹಸುಳೆಯನ್ನು ಮಂಗಳೂರು ಆಸ್ಪತ್ರೆಯಿಂದ ಆಂಬುಲೆನ್ಸ್ ನಲ್ಲಿ ತಿರುವನಂತಪುರದ ಶ್ರೀಚಿತ್ರ ಆಸ್ಪತ್ರೆಗೆ ರವಾನಿಸಲಾಗಿತ್ತು.
ಹಸುಳೆಯನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಮುಟ್ಟಿಸಿದ ಆಂಬುಲೆನ್ಸ್ ಮರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಹಾಗೂ ರಸ್ತೆಯಿಂದ ಪಕ್ಕಕ್ಕೆ ಚಲಿಸಿದ್ದು, ರಸ್ತೆ ಪಕ್ಕದಲ್ಲಿ ಚಲಿಸುತ್ತಿದ್ದ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಎರಡು ಸ್ಕೂಟರ್, ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಲ್ಲೇ ಇದ್ದಂತಹ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸೈಕಲ್ ಸವಾರ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.