ಮಂಗಳೂರು, ಅ 23: ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಐಟಿಯೂ ವತಿಯಿಂದ ಅ, ೨೩ ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದೇವೆ ಎಂದು ಸಿಐಟಿಯೂ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು. ಅವರು ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿ ಕರಾವಳಿಯಲ್ಲಿ ನೈಸರ್ಗಿಕ ಮರಳು ಲಭ್ಯವಿದ್ದರೂ ಜಿಲ್ಲೆಗೆ ಮಾತ್ರ ಸಿಗುತ್ತಿಲ್ಲ. ಹೀಗಾಗಿ ಕಟ್ಟಡ ಕಾರ್ಮಿಕರೂ ಉದ್ಯೋಗವಿಲ್ಲ್ಲದೆ ಕಂಗಾಲಾಗಿದ್ದಾರೆ ಎಂದರು. ಹೀಗಾಗಿ ರಾಜ್ಯ ಸರ್ಕಾರ ಕರಾವಳಿ ಜಿಲ್ಲೆಗೆ ಶಾಶ್ವತ ಮರಳು ನೀತಿಯನ್ನು ಜಾರಿಗೊಳಿಸುವ ತನಕ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುವುದು ಶತ ಸಿದ್ದ ಎಂದು ತಿಳಿಸಿದರು.