ಮಂಗಳೂರು,ಜ 07(MSP): ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜ.8 ಮತ್ತು ಜ.9 ರಂದು ಕರೆ ನೀಡಿರುವ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ತಿಳಿಸಿದ್ದಾರೆ.
ಮುಷ್ಕರಕ್ಕೆ ಈ ಹಿಂದೆಯೇ ದ.ಕ ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ ಬೆಂಬಲ ಸೂಚಿಸಿದ್ದು, ಸಿಟಿ ಬಸ್ ಮತ್ತು ಇತರ ಪ್ರದೇಶಗಳಿಗೆ ತೆರಳುವ ಖಾಸಗಿ ಬಸ್ ಮಾಲಕರು ಸಭೆ ನಡೆಸಿ ಅನಾವಶ್ಯಕ ಭಾರತ್ ಬಂದ್ಗೆ ನಮ್ಮ ಬೆಂಬಲ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ನಗರ ಹಾಗೂ ಅವಿಭಜಿತ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಚಾರ ಎಂದಿನಂತೆ ಇರಲಿದೆ.
ಇನ್ನು, ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನಲೆಯಲ್ಲಿ ಆ ದಿನ ಪರಿಸ್ಥಿತಿಯನ್ನು ಅವಲೋಕಿಸಿ ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಿಂದ ಬಸ್ ಸಂಚಾರ ಕಾರ್ಯಾಚರಿಸಲಾಗುವುದು ಎಂದು ಕೆಎಸ್ಆರ್ ಟಿಸಿ ಮಂಗಳೂರು ವಿಭಾಗಾಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.