ಮಂಗಳೂರು,ಜ 10 (MSP): ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈ ವಿಚಾರವನ್ನು ಪೊಲೀಸ್ ಗುಪ್ತಚರ ಇಲಾಖೆಯೇ ಬಹಿರಂಗಪಡಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ಹಿಂದೂ ನಾಯಕರಿಗೆ ಪೊಲೀಸ್ ಇಲಾಖೆ ವಿಶೇಷ ಭದ್ರತೆ ನೀಡಲಾಗಿದೆ.
ದ.ಕ ಜಿಲ್ಲೆ ಮೊದಲೇ ಕೋಮುಸೂಕ್ಷ್ಮ ಜಿಲ್ಲೆಯಾಗಿದ್ದು, ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆ ಮುಖಂಡರಿಗೆ ಅಲರ್ಟ್ ಆಗಿರಲು ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ ಎಂದು ಹೇಳಲಾಗಿದೆ.
ಈ ಹಿನ್ನಲೆಯಲ್ಲಿ ಕರಾವಳಿಯ ಪ್ರಮುಖ ನಾಯಕರಾದ ಶರಣ್ ಪಂಪ್ ವೆಲ್, ಜಗದೀಶ್ ಶೇಣವ ಹಾಗೂ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಇಲಾಖೆ ಸೂಚನೆ ನೀಡಿದ್ದಾರೆ ಎನ್ನುವುದು ವರದಿಯಾಗಿದೆ.