ಪುತ್ತೂರು, ಜೂ 04 (DaijiworldNews/HR): ಎರಡು ವರ್ಷಗಳ ಹಿಂದೆ ಹಿಂದು ಜಾಗರಣ ವೇದಿಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ನನ್ನು ಪುತ್ತೂರು ತಾಲೂಕಿನ ಪೆರ್ಲಂಪಾಡಿ ಸಮೀಪ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಚರಣ್ ರಾಜ್
2019ರ ಸೆ. 03ರಂದು ರಾತ್ರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂದರ್ಭ ಹಿಂಜಾವೇ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಚರಣ್ ರಾಜ್, ಕಿರಣ್ ರೈ ಹಾಗೂ ಪ್ರೀತೇಶ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿತ್ತು.
ಇನ್ನು ಚರಣ್ ರಾಜ್ ಅವರ ಮೆಡಿಕಲ್ ಶಾಪ್ ನಾಳೆ ಪೆರ್ಲಂಪಾಡಿಯಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಅಲ್ಲಿ ಕೆಲಸ ನಿರತರಾಗಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದು ತಲ್ವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗಿದೆ.