ಮಂಗಳೂರು,,ಜ 17(MSP): ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮದ ಹೆಸರಿನಲ್ಲಿ ವಂಚನೆ ಮಾಡುವವರ ವಿರುದ್ಧ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ರೂ.2 ಲಕ್ಷ ನಗದು ಉತ್ತೇಜನ ನೀಡುವುದಾಗಿ ಕೆಲವು ಅನಧಿಕೃತ ಸಂಘಟನೆಗಳು/ಸ್ವಯಂ ಸೇವಾ ಸಂಸ್ಥೆಗಳು/ವ್ಯಕ್ತಿಗಳು ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿದ್ದೂ ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿ ನೀಡದಂತೆ ಸಾರ್ವಜನಿಕರಿಗೆ ದ.ಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ನೀಡಲಾಗುವುದಿಲ್ಲ. ’ನಗದು ನೀಡುತ್ತೇವೆ’ ಎಂದು ಅನಧಿಕೃತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಈ ಯೋಜನೆಯಡಿ ಹಣವನ್ನು ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರನ್ನು ಮೋಸ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈ ರೀತಿ ವಂಚನೆಯನ್ನು ಮಾಡುವ ಅಥವಾ ಪ್ರಚಾರ ಮಾಡುವವರ ವಿರುದ್ಧ ಕ್ರಮ ಕಠಿಣ ತೆಗೆದುಕೊಳ್ಳಲಾಗುವುದು. ಇಂತಹ ವಂಚನೆಗಳು ಬೆಳಕಿಗೆ ಬಂದಾಗಲೆಲ್ಲಾ ಎಫ್.ಐ.ಆರ್ ಗಳನ್ನು ಈಗಾಗಲೇ ನೋಂದಾಯಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದೆ.
ಇಂತಹ ವಂಚಕರ ಬಲೆಗೆ ಬೀಳದಂತೆ ಸಾರ್ವಜನಿಕರಿಗೆ ಸಲಹೆ ಸೂಚನೆ ನೀಡಲಾಗಿದ್ದು , ಈ ಯೋಜನೆಯಡಿ ವಂಚಕರು ನಮೂನೆಯಲ್ಲಿ ಕೋರುವ ಯಾವುದೇ ವೈಯಕ್ತಿಕ ವಿವರಗಳನ್ನು ಅಂದರೆ ಆಧಾರ್ ಕಾರ್ಡ್, ಬ್ಯಾಂಕ್ ವಿವರಗಳು, ದೂರವಾಣಿ/ಮೊಬೈಲ್ ಸಂಖ್ಯೆ/ಇ-ಮೇಲ್ ಐಡಿ/ಇತರೆ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಬಾರದು. ಇಂತಹ ವಂಚನೆ ಕಾರ್ಯಮಾಡುವವರ ಕಂಡುಬಂದರೆ ಅಂತಹ ವ್ಯಕ್ತಿಗಳ/ಸಂಸ್ಥೆಗಳ ಹೆಸರನ್ನು ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ