ಬೆಂಗಳೂರು, ಜ 18(SM): ರಾಜ್ಯದ ಮಾಜಿ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಾಂಗ್ರೆಸ್ ಮೂಲಕವೇ ಕಾಂಗ್ರೆಸ್ ಪಕ್ಷ ಸೇರಿದವರು ಎಂಬುದನ್ನು ಅವರು ಮರೆಯಬಾರದು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷ ಅದರ ಸೃಷ್ಠಿಕರ್ತ ತಾನೇ ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಶಾಸಕರಿಗೆ ಆಮಿಷ ಒಡ್ಡಿ ಪಕ್ಷಕ್ಕೆ ಎಳೆದುಕೊಳ್ಳುವ ಸಂಪ್ರದಾಯ ಆರಂಭಿಸಿದ್ದೇ ಕಾಂಗ್ರೆಸ್ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷವು ಅತೃಪ್ತ ಶಾಸಕರನ್ನು ಕಟ್ಟಿಹಾಕಿ ಶಾಸಕಾಂಗ ಸಭೆ ನಡೆಸುತ್ತಿದೆ. 3:30 ಕ್ಕೆ ಆರಂಭವಾಗಬೇಕಾಗಿದ್ದ ಸಭೆ ತಡವಾಗಿ ಆರಂಭವಾಗಲು ಅದೇ ಕಾರಣ. ಬರದವರನ್ನು ಸಹ ಹೆದರಿಸಿ ಸಭೆಗೆ ಕರೆತರಲಾಗುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.