ಕುಂದಾಪುರ, ಜು 17 (DaijiworldNews/HR): ಶಿರೂರು ಕರಾವಳಿ ರಸ್ತೆಯ ರೈಲ್ವೆ ಸೇತುವೆಯ ಹಳಿಯ ಪಕ್ಕದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.

ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಶವ ಕೊಳೆತ ಸ್ಥಿತಿಯಲ್ಲಿರುವುದರಿಂದ ಗುರುತು ಪತ್ತೆಯಾಗಿಲ್ಲ.
ಇನ್ನು ಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.