ಮಂಗಳೂರು, ಜ26(SS): ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ, ಮಂಗಳೂರು ದಕ್ಷಿಣ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಜ.28ರಂದು ತಲಪಾಡಿಯಿಂದ ಪಂಪ್ವೆಲ್ವರೆಗೆ ಕಾಲ್ನಡಿಗೆ ಜಾಥಾವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಮತ್ತು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಿ - ಜನರ ಜೀವ ಉಳಿಸಿ ಎಂಬ ಘೋಷಣೆಯೊಂದಿಗೆ ಬೆಳಗ್ಗೆ 9 ಗಂಟೆಗೆ ತಲಪಾಡಿಯಿಂದ ಕಾಲ್ನಡಿಗೆ ಜಾಥಾ ಆರಂಭೊಳ್ಳಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ ನೇತೃತ್ವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮುಂದಾಳತ್ವದಲ್ಲಿ ಸಂಜೆಯ ವೇಳೆಗೆ ಕಾಲ್ನಡಿಗೆ ಪಂಪ್ವೆಲ್ಗೆ ತಲುಪಲಿದ್ದು, ಅಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.
ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ 10 ವರ್ಷಗಳಾದರೂ ಮುಗಿಯುತ್ತಿಲ್ಲ. ತೊಕ್ಕೊಟ್ಟು ಮೇಲ್ಸೇತುವೆಯೂ ಅಪೂರ್ಣವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ. ಆಡಳಿತ ಹಾಗೂ ಪ್ರತಿಪಕ್ಷ ಜನರ ಹಿತ ಕಾಪಾಡುವ ಕೆಲಸವನ್ನು ಮಾಡಬೇಕು. ಇದರಿಂದ ಮಾತ್ರವೇ ಪ್ರಜಾಪ್ರಭುತ್ವ ಸರಿಯಾಗಿ ನಡೆಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಥಾವನ್ನು ನಡೆುತ್ತಿರುವುದಾಗಿ ಹೇಳಿದರು.