ಮಂಗಳೂರು, ಜ26(SS): ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ 70ನೇ ಗಣರಾಜ್ಯೋತ್ಸವವನ್ನು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಚರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಗಣರಾಜ್ಯೋತ್ಸವ ಪೆರೇಡ್ ವೀಕ್ಷಣೆ ಮಾಡಿ, ಧ್ವಜವಂದನೆ ಸ್ವೀಕರಿಸಿ ಧ್ವಜಾರೋಹಣ ಮಾಡಿ, ಗಣರಾಜ್ಯೋತ್ಸವದ ಸಂದೇಶ ನೀಡಿದ್ದಾರೆ. ಈ ಗಣರಾಜ್ಯೋತ್ಸವವನ್ನು ನಾವೆಲ್ಲರೂ ಹಬ್ಬದ ಮಾದರಿಯಲ್ಲಿ ಸಂಭ್ರಮಿಸುವಂತಾಗಬೇಕು. ಇಂದಿನ ದಿನ ಭಾರತದ ಸಂವಿಧಾನವನ್ನು ನಾವೆಲ್ಲರೂ ಒಪ್ಪಿಕೊಂಡಿದ್ದು, ಮೌಲ್ಯಾಧಾರಿತ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದರು.
ವಿವಿಧ ಕ್ಷೇತ್ರದ ಸಾಧಕರನ್ನು ಈ ವೇಳೆ ಸನ್ಮಾನಿಸಿದ್ದು, ರಾಜ್ಯಪ್ರಶಸ್ತಿ ವಿಜೇತ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಅವರನ್ನು ಗೌರವಿಸಲಾಯಿತು. ಉಳಿದಂತೆ ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸದ ನಳಿನ್ಕುಮಾರ ಕಟೀಲು, ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ನಗರ ಪೊಲೀಸ್ ಆಯುಕ್ತ ಸುರೇಶ್, ಪಶ್ಚಿಮ ವಲಯ ಐಜಿಪಿ ಅರುಣ್ಚಕ್ರವರ್ತಿ, ಶಾಸಕ ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು.