ಉಡುಪಿ ಅ 26 : ಇಲ್ಲಿನ ಬ್ರಹ್ಮಾವರ ಅಕ್ಷಯ ಫರ್ನೀಚರ್ ಮುಂಭಾಗದಲ್ಲಿನ ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಗುಜರಿ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮೂಸ ಮತ್ತು ಅವರ ಪುತ್ರ ಸಮೀರ ಎಂಬವರಿಗೆ ಸೇರಿದ ಗುಜರಿ ಅಂಗಡಿ ಎಂದು ತಿಳಿದುಬಂದಿದ್ದು, ಬೆಂಕಿ ಅನಾಹುತದಿಂದ ಸುಮಾರು 3 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.