ಹೊಸದಿಲ್ಲಿ, ಜ276(SS): ಪ್ರಿಯಾಂಕ ಗಾಂಧಿ ಅವರು ಸಕ್ರೀಯ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವುದರಿಂದ ದೇಶ ರಾಜಕಾರಣದಲ್ಲಿ ಹೊಸ ಬದಲಾವಣೆ ಕಾಣಲಿದೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ.
ಪ್ರಿಯಾಂಕ ಗಾಂಧಿ ಆಗಮನದಿಂದ ಕಾಂಗ್ರೆಸ್ಸಿಗೆ ನೂರು ಆನೆಬಲ ಬಂದಿದೆ. ಇದರಿಂದ ಬಿಜೆಪಿ ದುರ್ಬಲ ಆಗಲಿದ್ದು, ಮುಂದೆ ಸರ್ಕಾರ ಮಾಡುವುದಿಲ್ಲ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾತ್ರವಲ್ಲ, ರಾಹುಲ್ ಗಾಂದಿಗೆ ಸಪೋರ್ಟ್ ಆಗಿ ನಿಂತಿದ್ದಾರೆ ಪ್ರಿಯಾಂಕ ಗಾಂಧಿ. ಆಂಧ್ರ, ಪ.ಬಂಗಾಳ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲು ಮುಣದಾಗಿದೆ. ಅಮೇಥಿ, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮಾಸ್ಟರ್ ಪ್ಲಾನ್ ಮಾಡಲಾಗಿದೆ.
ರಾಜಕಾರಣದಿಂದ ಕೊಂಚ ದೂರವೇ ಉಳಿದಿದ್ದ ಪ್ರಿಯಾಂಕ ಗಾಂಧಿ ಇನ್ಮುಂದೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಿದ್ದು, ಅವರನ್ನು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ್ದು, ಫೆಬ್ರವರಿಯಲ್ಲಿ ಪ್ರಿಯಾಂಕ ಜವಾಬ್ದಾರಿ ಸ್ವೀಕರಿಸಲಿದ್ದಾರೆ. ರಾಹುಲ್ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ಅವರ ಅಮೇಥಿ ಮತ್ತು ರಾಯ್ಬರೇಲಿಯ ಕ್ಷೇತ್ರಗಳ ಚುನಾವಣೆ ಪ್ರಚಾರಕ್ಕಷ್ಟೇ ಸೀಮಿತಗೊಂಡಿದ್ದರು.