ಕೊಚ್ಚಿ, ಜ 29(SM): ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸೋಮವಾರವಷ್ಟೇ ಕಾಂಗ್ರೆಸ್ ಅನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತಂದರೆ ಕನಿಷ್ಠ ಆದಾಯ ಖಾತ್ರಿ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದರು.
ಕೊಚ್ಚಿಯಲ್ಲಿ ನಡೆದ ಕಾಂಗ್ರೆಸ್ ನ ಬೂತ್ ಮಟ್ಟದ ಮಹಿಳಾ ಅಧ್ಯಕ್ಷರ ಸಮ್ಮೇಳನದಲ್ಲಿ ಮಂಗಳವಾರ ಅವರು ಮಾತನಾಡಿದರು. ಕಳೆದ ಐದು ವರ್ಷದಲ್ಲಿ ಒಂದರ ಮೇಲೆ ಒಂದು ಸುಳ್ಳು ಹೇಳುವುದರಲ್ಲಿ ನರೇಂದ್ರ ಮೋದಿ ಸಮಯ ಕಳೆದರು. ಅವರು ಯುವಜನರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು ಯಾವುದೂ ಈಡೇರಿಸಲಿಲ್ಲ ಎಂದು ಆರೋಪಿಸಿದ್ದಾರೆ.