ಮಂಗಳೂರು, ಫೆ02(SS): ಗುರುಪುರದ ಫಲ್ಗುಣಿ ನದಿಗೆ ನೂತನವಾಗಿ ನಿರ್ಮಿಸಲಾಗುತ್ತಿರುವ ಸುಮಾರು 37.84 ಕೋಟಿ. ರೂ. ವೆಚ್ಚದ ಸೇತುವೆಯ ಕಾಮಗಾರಿಗೆ ಶಿಲಾನ್ಯಾಸವನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್, ಫಲ್ಗುಣಿ ಗುರುಪುರ ಸೇತುವೆ ಬಹಳ ಪ್ರಮುಖ ಸೇತುವೆಯಾಗಿದೆ. ಇದು ಶಿಥಿಲಾವಸ್ಥೆಯಲ್ಲಿದ್ದು ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. 2 ವರ್ಷದೊಳಗೆ ನೂತನ ಸೇತುವೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಈ ವೇಳೆ ಶಾಸಕ ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಜನಾರ್ಧನ್ ಗೌಡ, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.