ಮಂಗಳೂರು, ಫೆ 03(SM): ಸರಕಾರದ ಅಸ್ಥಿರತೆಗೆ ಬಿಜೆಪಿ ಪ್ರಯತ್ನ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ರಾಜ್ಯ ಸರಕಾರದ ಪ್ರಯತ್ನಗಳು ಫಲಿಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಭದ್ರವಾಗಿದೆ. ಮೋದಿ ಹಾಗೂ ಅಮಿತ್ ಷಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಯಡಿಯೂರಪ್ಪ ಸರಕಾರವಿದ್ದಾಗಲೂ ಕಾಂಗ್ರೆಸ್ ನ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದ್ದರು. ಈಗಲೂ ಅದನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅಧಿಕಾರವಿಲ್ಲದೇ ಬಿಜೆಪಿಯವರಿಗೆ ಡಿಪ್ರೆಷನ್ ಆಗಿದೆ. ಅದಕ್ಕಾಗಿ ಕೀಳು ಮಟ್ಟದ ರಾಜಕೀಯಕ್ಕೆ ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದ್ದಾರೆ.