ಬೆಂಗಳೂರು, ಫೆ 4(MSP): ಮುಸ್ಲಿಮರು ಬಿಜೆಪಿಗೆ ಮತ ನೀಡಿದರೆ ಅವರು ನಿಜವಾದ ಮುಸ್ಲಿಮರೇ ಅಲ್ಲ. ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂರು ಕಾಂಗ್ರೆಸ್ಗೆ ಮತ ಹಾಕಬೇಕು.
ಒಂದು ವೇಳೆ ಬಿಜೆಪಿಗೆ ಮತ ಹಾಗಿದ್ರೆ ಅವರು ನಿಜವಾದ ಮುಸ್ಲಿಂರೇ ಅಲ್ಲ ಎಂದು ಅಲ್ಪಸಂಖ್ಯಾಕರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಈ ವಿಚಾರವನ್ನು ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಲ್ ಇಂಡಿಯಾ ಜಮೀಯತುವುಲ್ ಮನ್ಸೂರ್ ಭಾನುವಾರ ಹಮ್ಮಿಕೊಂಡಿದ್ದ ನದಾಫ್, ಪಿಂಜಾರ ಮತ್ತು ಮನ್ಸೂರಿ ಸಮಾಜಗಳ ರಾಷ್ಟ್ರೀಯ ಜಾಗೃತಿ ಸಮಾವೇಶ ಉದ್ಘಾಟಿಸಿ ತಿಳಿಸಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರದಾನಿಯಾದರೆ ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕಬೇಕಾಗುತ್ತದೆ. ಹೀಗಾಗಿ ಜಾತ್ಯಾತೀತ ಪಕ್ಷಕ್ಕೆ ನಮ್ಮ ವೋಟ್ ಹಾಕಬೇಕು. ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಒಂದೇ ಪಕ್ಷಕ್ಕೆ ಮತ ಚಲಾಯಿಸಿದ್ರೆ ಕಾಂಗ್ರೆಸ್ 20ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು. ಹೀಗಾಗಿ ನಿಜವಾದ ಮುಸ್ಲಿಂರೇ ಆದರೇ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದು ಕೇಳಿಕೊಂಡರು.