ಮಂಗಳೂರು,ಫೆ 7(MSP): ಕರಾವಳಿ ಜಿಲ್ಲೆಯಲ್ಲಿ ಬುಧವಾರ (ಫೆ.6) ಮೋಡ ಕವಿದ ಬಿಸಿಲಿನ ವಾತಾವರಣ ಕಾಣಿಸಿಕೊಂಡಿತ್ತು. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ್ ಇದಾಗಿದ್ದು, ಎರದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಮಧ್ಯಾಹ್ನದ ಬಳಿಕ ತುಂತುರು, ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಇಂದು ಕೂಡಾ ಇದೇ ವಾತಾವರಣ ಮುಂದುವರಿದರೆ, ಮಳೆಯ ಸಾಧ್ಯತೆ ಹೆಚ್ಚಾಗಿದೆ. " ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ ಸೇರಿದಂತೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದೆ. ಸಮುದ್ರದಲ್ಲಿ ಯಾವುದೇ ವಾಯುಭಾರ ಕುಸಿತ ಉಂಟಾಗಿಲ್ಲ.ಸುಳಿಗಾಳಿ ಸರಿಯಾಗುತ್ತಿದ್ದಂತೆ ವಾತಾವರಣ ಸಹಜ ಸ್ಥಿತಿಗೆ ಬರಲಿದೆ. ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಾದ ಅಧಿಕಾರಿ ಡಾ. ಎಸ್.ಎಂ ಎಂ ಗಾವಸ್ಕರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ದಿನದ ಗರಿಷ್ಟ ಉಷ್ಣಾಂಶ 22.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉಡುಪಿಯಲ್ಲಿ ಗರಿಷ್ಟ 33 ಡಿಗ್ರಿ ಸೆಲ್ಸಿಯಲ್ ಹಾಗೂ ಕನಿಷ್ಟ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.