ಉಡುಪಿ,ಫೆ 7(MSP): ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಫೆ. 7 ರ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕೊರ್ಲಪಾಟಿ ಅವರು ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಕೆಲಸ ಮಾಡಿದ್ದರು. ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾಗಿದ್ದ ಅವರನ್ನು ಉಡುಪಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಅವರನ್ನು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿಯನ್ನಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ವರ್ಗಾವಣೆ ಮಾಡಲಾಗಿದೆ