ಧರ್ಮಸ್ಥಳ ಅ 29 : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಧಾನಮಂತ್ರಿಯೊಬ್ಬರು ಶ್ರೀ ಕ್ಷೇತ್ರಕ್ಕೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸುಮಾರು ೧೦.೧೫ ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅಲ್ಲಿಂದ ನೇರವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿದ್ದಾರೆ .ನರೇಂದ್ರ ಮೋದಿಯವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ , ಸಂಸದ ನಳಿನ್ ಕುಮಾರ್, ಮೇಯರ್ ಕವಿತಾ ಸನಿಲ್ ಹೆಲಿ ಪ್ಯಾಡ್ ನಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಿದರು. ಬಳಿಕ ಶ್ರೀ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ತೆರಳಿದ್ದಾರೆ.ದೇವಸ್ಥಾನದ ಬಳಿಯೂ ಮೋದಿಗೆ ಪೂರ್ಣ ಕುಂಭ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಖುದ್ದು ದೇವಸ್ಥಾನದ ಒಳಗೆ ಕರೆದೊಯ್ದಿದ್ದಾರೆ. ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಧರ್ಮಸ್ಥಳ ಕ್ಷೇತ್ರದ ಗ್ರಾಮಾಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಕಾರ್ಯಕ್ರಮದ ನಿಮಿತ್ತ ಭದ್ರತಾ ದೃಷ್ಟಿಯಿಂದ ಭಕ್ತರ ಆಗಮನಕ್ಕೆ ಇಂದು ನಿರ್ಬಂಧ ವಿಧಿಸಲಾಗಿದೆ.