ಮಂಗಳೂರು, ಫೆ 13(SM): ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ನಗರದ ವೆಲೆನ್ಸಿಯಾದ ಸ್ಟೇಟ್ ಬ್ಯಾಂಕ್ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಉಜ್ಜೋಡಿ ವೆಲೆನ್ಸಿಯಾ ನಿವಾಸಿ ಪ್ರೀತಂ ಜೆ(31) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನನ್ನು ವಶಪಡಿಸಿದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 90220 ರೂಪಾಯಿ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ನಗರದ ಪಂಜಿಮೊಗರು ವಿವೇಕನಗರ ಸಾರ್ವಜನಿಕ ರಸ್ತೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯಾದ ಸನತ್ ರಾವ್ (22) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದಾರೆ. ಆರೋಪಿಯಿಂದ ಸುಮಾರು 104 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 3.52 ಲಕ್ಷ ರೂಪಾಯಿ ಎಂದು ಅಂಗಾಜಿಸಲಾಗಿದೆ.
ಸದ್ಯ ಆರೋಪಿಗಳ ವಿರುದ್ಧ ಇಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.