ಕಾಸರಗೋಡು,ಫೆ 21(MSP):ಯುವ ಕಾಂಗ್ರೆಸ್ ಕಾರ್ಯಕರ್ತ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊರ್ವ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ. ಬಂಧಿತನನ್ನು ಸಜಿ ಜೋರ್ಜ್ ಎಂದು ಗುರುತಿಸಲಾಗಿದೆ.
ಸಿಪಿಎಂ ಕಾರ್ಯಕರ್ತನಾಗಿರುವ ಸಜಿ ಆರೋಪಿಗಳು ಸಂಚರಿಸಿದ್ದ ವಾಹನದ ಚಾಲಕನಾಗಿದ್ದನು. ಕೃತ್ಯಕ್ಕೆ ಬಳಸಿದ್ದ ಈ ಕಾರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದರಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎರಡಕ್ಕೇರಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಪಿಎಂ ಸ್ಥಳೀಯ ಮುಖಂಡನಾದ ಪೀತಾಂಬರನ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಕಸ್ಟಡಿಯಲ್ಲಿರುವ ಉಳಿದ ಐವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ .ಬಂಧಿತ ಪೀತಾಂಬರನನ್ನು ಬುಧವಾರ ಘಟನಾ ಸ್ಥಳಕ್ಕೆ ಕೊಂಡೊಯ್ದು ಮಾಹಿತಿ ಕಲೆ ಹಾಕಲಾಗಿತ್ತು .
ನಾಲ್ಕು ಮಾರಕಾಸ್ತ್ರ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು .ಪೀತಾಂಬರನನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ