ಉಡುಪಿ, ಫೆ 21(SM): ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಬರಹ ಪ್ರಕಟಿಸಿದ ಆರೋಪದ ಮೇಲೆ ಪ್ರವೀಣ್ ಯಕ್ಷಿಮಠ ವಿರುದ್ಧ ದೂರು ದಾಖಲಿಸಲಾಗಿದೆ.
ಉಡುಪಿ ಎಸ್ಪಿಗೆ ಕೂಡ ದೂರು ನೀಡಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಎಂಬುವುದಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ದೂರು ನೀಡಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೂ ದೂರಿನ ಪ್ರತಿಯನ್ನು ರವಾನಿಸಲಾಗಿದೆ. ಅಲ್ಲದೆ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೂ ಜಿಲ್ಲಾ ಬಿಜೆಪಿ ಮಾಹಿತಿ ರವಾನಿಸಿದೆ.