ಕಾಸರಗೋಡು, ಫೆ 27(SM): ಕಾಸರಗೋಡಿನ ಪೆರಿಯದಲ್ಲಿ ನಡೆದ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸಿಪಿಎಂನ ಪ್ರಮುಖ ಮುಖಂಡರ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಪೀತಾಂಬರನ್ ಈ ಮಾಹಿತಿ ನೀಡಿದ್ದಾನೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಪೀತಾಂಬರನ್ ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಹಾಗೂ ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿತ್ತು. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು ಆರೋಪಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಸಂದರ್ಭ ಆರೋಪಿ ಪ್ರಕರಣದಲ್ಲಿ ಸಿಪಿಎಂನ ಪ್ರಮುಖ ನಾಯಕ ಪಾಲ್ಗೊಂಡಿದ್ದಾನೆ ಎಂಬುವುದಾಗಿ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.
ಇದೀಗ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.