ಮಂಗಳೂರು,ಮಾ 03 (MSP): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯಲಿದ್ದು ಯಾವುದೇ ಗೊಂದಲ ಭಿನ್ನಾಭಿಪ್ರಾಯಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿಗೆ ಅಪಾಯ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಾ. 3ರ ಭಾನುವಾರ ಮಂಗಳೂರಿಗೆ ಆಗಮಿಸಿದ್ದು, ಇದಕ್ಕೂ ಮುಂಚೆ ಎಂಎಲ್’ಸಿ ಬಿ.ಎಂ.ಫಾರೂಕ್ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ವಿಚಾರ ಮಾತನಾಡಿದರು.
ಲೋಕಸಭಾ ಚುನಾವಣೆ ಮುಂಚೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರದ ಬಗ್ಗೆ ಹಾಗೂ ಸೀಟು ಹಂಚಿಕೆ ವಿಚಾರದಲ್ಲಿ ಸಾಕಷ್ಟು ಊಹಾಪೋಹಗಳು ಹರಡಿವೆ.ಸೀಟು ಹಂಚಿಕೆ ವಿಚಾರದಲ್ಲಿ ಭಿನ್ನಮತ ಉಂಟಾಗುತ್ತದೆ ಎನ್ನೋ ಮಾತುಗಳು ಕೇಳಿಬಂದಿವೆ. ಆದರೆ ಯಾವುದೇ ಭಿನ್ನಾಭಿಪ್ರಾಯಕ್ಕೆ ನಾನು ಅವಕಾಶ ಕೊಡಲಾರೆ.12 ಸ್ಥಾನ ಜೆಡಿಎಸ್'ಗೆ ಬಿಟ್ಟುಕೊಡಲು ಹೇಳಿದ್ದೇವೆ. ಆದರೆ ಯಾವುದು ಅಂತಿಮ ಅಲ್ಲ. ಈ ಬಗ್ಗೆ ನವದೆಹಲಿಯಲ್ಲಿ ಎರಡೂ ಪಕ್ಷದ ರಾಷ್ಟ್ರೀಯ ಮುಖಂಡರು ಚರ್ಚಿಸಿ ಸೀಟು ಹಂಚಿಕೆಯ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ , ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಎಂ.ಬಿ ಸದಾಶಿವ ಮುಂತಾದವರು ಉಪಸ್ಥಿತರಿದ್ದರು.