ಗುರುಪುರ,ಮಾ 04(MSP): ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾ.4 ರಂದು ಬ್ರಹ್ಮಕಲಶೋತ್ಸವ ಆರಂಭಗೊಳ್ಳಲಿದೆ. ಬೆಳಗ್ಗೆ 8.30ರಿಂದ ಆಚಾರ್ಯಾದಿ ಋತ್ವಿಜರ ಸ್ವಾಗತ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಹವಾಚನ, ನಾಂದಿ, ಋತಿಗ್ವರಣ, ಕಂಕಣಬಂಧ, ಆದ್ಯಗಣಯಾಗ, ವೇದ ಪಾರಾಯಣ ಆರಂಭಗೊಳ್ಳಲಿದೆ.
ಸಾಯಂಕಾಲ 5 ರಿಂದ ಪ್ರಾದಾದಪರಿಗ್ರಹ, ಪುಣ್ಯಾಹವಾಚನ, ತೋರಣ ಮಹೂರ್ತ, ಉಗ್ರಾಣ ಮಹೂರ್ತ, ಸಪ್ತಶುದ್ಧಿ, ಪ್ರಾಸಾದಶುದ್ಧಿ, ರಾಕ್ಷೊಘ್ನಹೋಮ, ವಾಸ್ತುಪೂಜೆ, ವಾಸ್ತುಹೋಮ, ಕಲಶಾಭಿಷೇಕ ಹಾಗು ಮಹಾಪೂಜೆ ನಡೆಯಲಿದೆ. ಸಂಜೆ 6ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದೆ.
9 ದಿನಗಳ ಕಾಲ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕಾಗಿ ಗುರುಪುರ ಕೈಕಂಬದಿಂದ ಪೊಳಲಿಯವರೆಗೆ ರಸ್ತೆ ಇಕ್ಕೆಲ ಕೇಸರಿಮಯವಾಗಿದ್ದು ಭಗವಾಧ್ವಜ, ಫ್ಲೆಕ್ಸಗಳು ರಾರಾಜಿಸುತ್ತಿದೆ.
ಮಾ.4 ರಂದು ದೇವಸ್ಥಾನಕ್ಕೆ ವಿವಿಧೆಡೆಗಳಿಂದ ಹಸಿರು ಹೊರಕಾಣಿಕೆ ಬರಲಿದ್ದು, ಇದಕ್ಕಾಗಿ ದೇವಳ ಬಳಿ ಪ್ರತ್ಯೇಕ ವಿಶಾಲ ಚಪ್ಪರ ವ್ಯವಸ್ಥೆ ಮಾಡಲಾಗಿದೆ.