ಉಡುಪಿ,ಮಾ 05(MSP): ಲೈಟ್ ಫಿಶಿಂಗ್, ಬುಲ್ ಟ್ರಾಲ್ ಅವೈಜ್ಞಾನಿಕ ಮೀನುಗಾರಿಕೆ ವಿರೋಧಿಸಿ ಮಲ್ಪೆ ಆಳ ಸಮುದ್ರ ಮೀನುಗಾರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಮಲ್ಪೆ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮಾ.5 ರ ಮಂಗಳವಾರ ನಡೆಯಿತು. ಪರ್ಸಿನ್ ಮೀನುಗಾರರು ಅವೈಜ್ಞಾನಿಕ ಮೀನುಗಾರಿಕೆ ನಡೆಸುತ್ತಿದ್ದರೂ ಇದುವರೆಗೆ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಎರಡು ಗುಂಪುಗಳ ಮಧ್ಯೆ ತಳ್ಳಾಟ:
ಇನ್ನು ಪ್ರತಿಭಟನೆಯ ವೇಳೆ ಬಂದರು ಗೇಟ್ ಬಂದ್ ಮಾಡಿರುವುದನ್ನು ವಿರೋಧಿಸಿದ ಪರ್ಸಿನ್ ಮೀನುಗಾರರು ಗೇಟ್ ತೆರವಿಗೆ ಆಗ್ರಹಿಸಿದರು. ಈ ವೇಳೆ ತಳ್ಳಾಟ, ಮಾತಿನ ಚಕಮಕಿ ನಡೆಯಿತು.
ಪೊಲೀಸರ ಬಿಗುಬಂದೋಬಸ್ತ್:
ಪ್ರತಿಭಟನೆಯ ವೇಳೆ ಹತ್ತಾರು ಪೊಲೀಸರು ಬಂದೋಬಸ್ತ್ ನಡೆಸಿದ್ದರು. ಪೊಲೀಸರು ಎರಡು ಕಡೆಯ ಮುಖಂಡರ ಜತೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.