ಮಂಗಳೂರು,ಮಾ.07(AZM):39 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿರುವ ಆರೋಪಿಯೋರ್ವನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಆದೇಶದಂತೆ ರೌಡಿ ನಿಗ್ರಹ ದಳದ ಸಿಬ್ಬಂದಿಗಳು ಇಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅವಿಲ್ ಡಿಸೋಜ(56) ಎಂದು ಗುರುತಿಸಲಾಗಿದೆ. ಈತ 1980ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣವೊಂರದಲ್ಲಿ ಗಣೇಶ್ ಶೆಟ್ಟಿ ಎಂಬವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ್ದು,ಬಳಿಕ ಸುಮಾರು 39 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡು ವಿದೇಶದಲ್ಲಿ ವಾಸವಾಗಿದ್ದ. ಇದೀಗ ಆರೋಪಿ ಮಂಗಳೂರಿಗೆ ಬಂದಿದ್ದಾನೆ ಎನ್ನುವ ಮಾಹಿತಿಯ ಮೇರೆಗೆ ರೌಡಿ ನಿಗ್ರಹ ದಳದ ಸಿಬ್ಬಂದಿಗಳು ದಸ್ತಗಿರಿ ಮಾಡಿದ್ದು, ಮುಂದಿನ ಕ್ರಮಕೈಗೊಳ್ಳಲು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ , ಹನುಮಂತರಾಯ (ಐಪಿಎಸ್),ಉಮಾ ಪ್ರಶಾಂತ್, ಡಿ.ಸಿ.ಪಿ ಇವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಎ.ಸಿ.ಪಿ. ಯವರು ಮತ್ತು ಸಿಬ್ಬಂದಿಯವರುಗಳು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.