ವಿಟ್ಲ, ಮಾ 08(SM): ಸಹೋದರನೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆಯೊಂದು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಪೆರುವಾಯಿ ಗ್ರಾಮದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 13ವರ್ಷದ ಬಾಲಕಿ ಸದ್ಯ ನಾಲ್ಕು ತಿಂಗಳ ಗರ್ಭಿಣಿ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.
ಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲು ಹೋದ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯ ಮೂಲಕ ಅಪ್ರಾಪ್ರ ಬಾಲಕಿ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬಂದಿದೆ. ಅಚ್ಚರಿಯ ವಿಚಾರವೆಂದರೆ, ಬಾಲಕಿಯ ಮೇಲೆ ಸಹೋದರನೇ ಅತ್ಯಾಚಾರ ನಡೆಸಿರುವುದು.
ಪೆರುವಾಯಿ ಆರೋಗ್ಯ ಕೇಂದ್ರದ ವತಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುವ ಸಮಯ ಬಾಲಕಿಯು ವಿಭಿನ್ನವಾಗಿದ್ದಳು. ಇದರಿಂದ ಅನುಮಾನಕ್ಕೊಳಗಾದ ಆರೋಗ್ಯ ಕೇಂದ್ರದ ದಾದಿ ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ಸೂಚಿಸಿದ್ದಾರೆ. ಸೂಚನೆಯಂತೆ ಮಂಗಳೂರಿನಲ್ಲಿ ತಪಾಸಣೆ ನಡೆಸುವ ಸಮಯದಲ್ಲಿ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ.
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಪ್ರಾಪ್ತ ಬಾಲಕಿಯ ವಿಚಾರಣೆ ನಡೆಸಿದಾಗ ಆಕೆಯ ಸಹೋದರನಿಂದಲೇ ವರ್ಷದಿಂದ ನಿರಂತರ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. 17ವರ್ಷದ ಬಾಲಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಾಲ ನ್ಯಾಯ ಮಂಡಳಿಯ ಪಾಲನಾ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.