ಮಂಗಳೂರು,ಮಾ.10(AZM):ಮಂಡ್ಯದಲ್ಲಿ ಲೋಕಸಭಾ ಸೀಟು ಹಂಚಿಕೆ ವಿಚಾರದ ಕುರಿತು ಮಾಜಿ ಸಿಎಂ, ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು, ಮಂಡ್ಯ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಪರಿವರ್ತನಾ ಯಾತ್ರೆ ನಿಮಿತ್ತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಬಂದಿಳಿದ ಮಾಜಿ ಸಿ.ಎಂ.ಸಿದ್ದರಾಮಯ್ಯನವರು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದರು. ಲೋಕಸಭಾ ಚುನಾವಣಾ ದಿನಾಂಕ ಇಂದೇ ಘೋಷಣೆಯಾಗುವ ಸಾಧ್ಯತೆ ಇದೆ ಎಂದ ಮಾಜಿ ಸಿಎಂ, ಮಂಡ್ಯ ಜೆಡಿಎಸ್ ಪಾಲಾಗುವ ಸಾಧ್ಯತೆ ಇದ್ದು, ಯಾರು ಅಭ್ಯರ್ಥಿ ಎಂದು ಇನ್ನೂ ತಿಳಿದು ಬಂದಿಲ್ಲ ಎಂದು ಹೇಳಿದರು.
ಇನ್ನು ಸಮ್ಮಿಶ್ರ ಸರಕಾರದಲ್ಲಿ ವಿಶ್ವಾಸ ಪ್ರಶ್ನೆ ಬರುವುದಿಲ್ಲ.ಹಾಗಾಗಿ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.