ಮಣಿಪಾಲ,ಮಾ11(AZM):ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಮೃತ ಯುವಕನನ್ನು ಸುಚೀಂದ್ರ(26) ಎಂದು ಗುರುತಿಸಲಾಗಿದ್ದು, ಈತ ಪ್ರಗತಿನಗರ, ಉದ್ಯಾವರ ಬಲಾಯಿಪಾದೆಯಲ್ಲಿ ಇರುವ, ಜನತಾ ಟಯರ್ ವರ್ಕ್ಸನಲ್ಲಿ ದುಡಿಯುತ್ತಿದ್ದ ಎನ್ನಲಾಗಿದೆ. ಈತ ತನ್ನ ಮನೆ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಸಂಶಯಿಸಲಾಗಿದೆ.
ಮಣಿಪಾಲ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.