ಮಂಗಳೂರು, ನ 3: ಯೋಗಿ ಆದಿತ್ಯನಾಥ, ಸಾಕ್ಷಿ ಮಹಾರಾಜರಂತಹ ಮಹಾಮಂಡಲೇಶ್ವರರು ರಾಜಕೀಯ ಅಖಾಡಕ್ಕೆ ಇಳಿದ ಬೆನ್ನಲ್ಲೇ ಇದೀಗ ಮತ್ತೋರ್ವ ಸ್ವಾಮೀಜಿ ರಾಜಕೀಯ ಪ್ರವೇಶ ಮಾಡಲು ನಿರ್ಧರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ರಾಜಕೀಯ ಅಖಾಡಕ್ಕೆ ಧುಮುಕಲು ನಿರ್ಧರಿಸಿದ್ದು, ಮಾತ್ರವಲ್ಲದೇ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕೂಡ ತೀರ್ಮಾನಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ನಿರ್ಧರಿಸಿರುವ ವಜ್ರದೇಹಿ ಮಠದ ಸ್ವಾಮೀಜಿಯ ಜೊತೆ ಸಂಘ ಪರಿವಾರದ ಸಂಘಟನೆಗಳು ಮತ್ತು ಬಿಜೆಪಿಯ ಉನ್ನತ ಮಟ್ಟದ ನಾಯಕರು ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.