ಉಪ್ಪಿನಂಗಡಿ,ಮಾ14(AZM):ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪೆರಿಯಶಾಂತಿ ಎಂಬ ಪ್ರದೇಶದ ಅರಣ್ಯವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಂಡು ಬಂದ ಹಿನ್ನಲೆ ಸ್ಥಳೀಯರು ಆತಂಕಕ್ಕೆ ಒಳಗಾದ ಘಟನೆ ಇಂದು ನಡೆದಿದೆ.
ಇಂದು ಮಧ್ಯಾಹ್ನನದ ವೇಳೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ನೀತಿ ತಂಡದ ಸದಸ್ಯರು ಸೇರಿದಂತೆ ಸಾರ್ವಜನಿಕರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಸುಮಾರು ಮೂರು ಘಂಟೆಯ ವೇಳೆ ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯು ಮತ್ತಷ್ಟು ತೀವ್ರತೆಯಿಂದ ಉರಿಯಲಾರಂಭಿಸಿತು.
ಇದನ್ನು ಗಮನಿಸಿದ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ ಉಪ್ಪಿನಂಗಡಿ ಅರಣ್ಯಾಧಿಕಾರಿ ಸಂಧ್ಯಾ ಅವರ ಗಮನಕ್ಕೆ ತಂದಿದ್ದು,ತಕ್ಷಣವೇ ಕಾರ್ಯಪ್ರವರ್ತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾದರು.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.