ಮಂಗಳೂರು,ಮಾ 16 (MSP): ಕಮಿಷನರೇಟ್ ವ್ಯಾಪ್ತಿಯಲ್ಲಿ ಪರವಾನಿಗೆ ಪಡೆದ 2005 ಗನ್ ಇದ್ದು, ಇವುಗಳಲ್ಲಿ ಮಾ.15 ರ ಶುಕ್ರವಾರದ ವರೆಗೆ 1773 ಗನ್ ಗಳನ್ನು ವಿವಿಧ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲಾಗಿದೆ.
ಸಾಂದರ್ಭಿಕ ಚಿತ್ರ
ಲೋಕಸಭಾ ಚುನಾವಣೆ ಸಂದರ್ಭ ಅಕ್ರಮ, ಅವ್ಯವಹಾರಗಳನ್ನು ತಡೆಯಲು ಹಾಗೂ ಶಾಂತಿ ಪಾಲನೆಗಾಗಿ ಆಯುಧ ರಹದಾರಿ ಹೊಂದಿರುವವರ ಶಸ್ತ್ರಾಸ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಮಾ.18 ರೊಳಗೆ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದರು.
ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿಯಲ್ಲಿರಿಸಲು ಅವಶ್ಯಕವಾಗಿರುತ್ತದೆ ಎಂದು ಆದೇಶ ಹೊರಡಿಸಿದ್ದರು.
ಕಮಿಷನರೇಟ್ ವ್ಯಾಪ್ತಿಯಲ್ಲಿ ಡೆಪಾಸಿಟ್ ಮಾಡಲು ಇನ್ನೂ 237 ಗನ್ ಬಾಕಿ ಇದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.