ಮಂಗಳೂರು,ಮಾ.16(AZM):ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಆಶ್ರಯದಲ್ಲಿ "ಮತದಾನ ಮಾಡ ಬನ್ನಿ " ಜಾಗೃತಿ ಜಾಥಾ ಕಾರ್ಯಕ್ರಮ ನಡೆದಿದ್ದು, ಈ ಹಿನ್ನಲೆ ನಡೆದ ವಾಹನ ಜಾಥಕ್ಕೆ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಸೆಲ್ವಮಣಿ ಆರ್ ಅವರು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.ಈ ವಾಹನ ಜಾಥಾದಲ್ಲಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಮತದಾರರಿಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.
ಈ ವೇಳೆ ಪಾಲಿಕೆ ಕಮೀಷನರ್ ಮಹಮ್ಮದ್ ನಝೀರ್, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.