ಬಂಟ್ವಾಳ, ನ 4: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಇರಾ ಗ್ರಾಮದ ಸಂಪಿಲ ಎಂಬಲ್ಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮಕ್ಕೆ ಬಿಟ್ಟು ಬಂದಿದ್ದಾರೆ.
ಅಪರಿಚಿತ ವ್ಯಕ್ತಿಯನ್ನು ವಿಚಾರಿಸಿದಾಗ ಯಾವುದೇ ಸರಿಯಾದ ಉತ್ತರ ನೀಡುತ್ತಿಲ್ಲ. ಹೆಸರು ವಿಳಾಸವನ್ನು ಕೂಡಾ ತಿಳಿಸದ ಹಿನ್ನಲೆಯಲ್ಲಿ ಈ ವ್ಯಕ್ತಿಯನ್ನು ಆಶ್ರಮದಲ್ಲಿ ಸೇರಿಸಲಾಗಿದೆ. ಈತನ ಗುರುತು ಇದ್ದವರು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.