ಉಡುಪಿ, ಮಾ 20(MSP): ಸಹಬಾಳ್ವೆ ನೇತೃತ್ವದಲ್ಲಿ ನಡೆದ ಮಾ.17ರಂದು ಮಧ್ಯಾಹ್ನ 3ಗಂಟೆಗೆ ಉಡುಪಿ ಕಲ್ಸಂಕ ಬಳಿಯ ರಾಯಲ್ ಗಾರ್ಡನ್ನಲ್ಲಿ ನಡೆದ ಸರ್ವ ಜನೋತ್ಸವದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ, ಧರ್ಮಗಳನ್ನು ನಿಂದಿಸಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಸಹಬಾಳ್ವೆ ಅಧ್ಯಕ್ಷ ಸಹಿತ ಐವರ ಮೇಲೆ ಪ್ರಕರಣ ದಾಖಲಾಗಿದೆ.
ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ, ಹಿರಿಯ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು, ದಲಿತ ಮುಖಂಡ ಇನುಂದಾರ್ ಹೊನ್ನಾಪುರ, ನಾಗರಾಜ್, ಸಾಮಾಜಿಕ ಚಿಂತಕ ಮಹೇಂದ್ರ ಕುಮಾರ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಮಾ. 17 ರಂದು ಕಲ್ಸಂಕದ ರಾಯಲ್ ಗಾರ್ಡನ್ನಲ್ಲಿ ನಡೆದ ಸಹಬಾಳ್ವೆ ಕಾರ್ಯಕ್ರಮದಲ್ಲಿ ಈ ಐವರು ಮಾಡಿರುವ ಭಾಷಣ ಚುನಾವಣಾ ಪ್ರಚಾರದ ಜತೆಗೆ ಧರ್ಮಗಳ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಚುನಾವಣಾ ವೀಕ್ಷಣಾಧಿಕಾರಿಗಳು ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.